ಬೆಂಗಳೂರು: ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆದಿದ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ.
3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ ಟಿವಿ-ಡಿ1 ರಾಕೆಟ್ ಉಡಾವಣೆ ಮಾಡಿದೆ. ಯಶಸ್ವಿಯಾಗಿ ಹಾರಾಟ ನಡೆಸಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ:ಕೊನೇ ಕ್ಷಣದಲ್ಲಿ ಗಗನಯಾನ ಪರೀಕ್ಷಾರ್ಥ ಉಡಾವಣೆ ಸ್ಥಗಿತಗೊಳಿಸಿದ ಇಸ್ರೋ!
ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದರೇ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು.