ಬೆಂಗಳೂರು : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 400 ರನ್ಗಳ ಬೃಹತ್ ಟಾರ್ಗೆಟ್ ದಾಖಲಿಸಿದೆ.
ಮುಂಬೈನ್ ವಾಂಖಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ 20ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ಬೌಲರ್ಗಳ ಬೆವರಿಳಿಸಿತು.
ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 399 ರನ್ ಚಚ್ಚಿದೆ. ಹರಿಣಗಳ ಪರ ಕ್ಲಾಸೆನ್ ಹಾಗೂ ಜಾನ್ಸೆನ್ ಕ್ಲಾಸ್ ಇನ್ನಿಂಗ್ಸ್ ಆಡಿದರು. ಕ್ಲಾನೆಸ್ 67 ಎಸೆತಗಳಲ್ಲಿ 4 ಬೊಂಬಾಟ್ ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ 109 ರನ್ ಚಚ್ಚಿದರು. ಹೆಂಡ್ರಿಕ್ಸ್ 85, ಮಾರ್ಕೊ ಜಾನ್ಸೆನ್ ಅಜೇಯ 75, ಡಸ್ಸನ್ 60 ಹಾಗೂ ಮಾಕ್ರಮ್ 42 ರನ್ ಸಿಡಿಸಿದರು. ಇಂಗ್ಲೆಂಡ್ ಪರ ಟೋಪ್ಲಿ 3, ಆದಿಲ್ 2 ವಿಕೆಟ್ ಪಡೆದರು.
ಸೌತ್ ಆಫ್ರಿಕಾ ತಂಡ
ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್, ರೀಸ್ ಟೋಪ್ಲಿ