Thursday, November 14, 2024

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್, ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ.3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಲಾಗಿದೆ. ಬೋಧಕ ಸಿಬ್ಬಂದಿ(UGC/ AICTE/ ICAR ವೇತನ ಶ್ರೇಣಿ) ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ನಮ್ಮ ಈ ಆದೇಶವು ರಾಜ್ಯ ಸರ್ಕಾರಿ ನೌಕರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ ಎಂದು ಭಾವಿಸಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES