Sunday, December 22, 2024

ಯಜಮಾನಿಯರಿಗೆ ಇನ್ನೂ ಒಲಿಯದ ‘ಗೃಹಲಕ್ಷ್ಮಿ’!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಜನಪ್ರಿಯ ಗೃಹಲಕ್ಷ್ಮಿ ಯೋಜನೆಗೆ ಜಿಲ್ಲೆಯಿಂದ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿಯೇ 17 ಸಾವಿರ ಮಂದಿ ಗೃಹಲಕ್ಷ್ಮಿಯರಾಗಲು ಇನ್ನೂ ಸಾಧ್ಯವಾಗಿಲ್ಲ.

ಗೃಹಲಕ್ಷ್ಮಿ ಯೋಜನೆಗೆ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 3.40 ಲಕ್ಷ ಮಂದಿ ಯೋಜನೆ ಫಲಾನುಭವಿಗಳಾಗಿದ್ದು, ಇವರ ಖಾತೆಗೆ ತಲಾ 2 ಸಾವಿರ ಹಾಕಲು ಅನುದಾನ ಬಿಡುಗಡೆಯಾಗಿತ್ತು. ಆದರೆ, ವಿವಿಧ ತಾಂತ್ರಿಕ ಕಾರಣಗಳಿಂದಾಗಿ 3.40 ಲಕ್ಷ ಮಂದಿ ಪೈಕಿ 3.23 ಲಕ್ಷ ಮಂದಿಗೆ ಮಾತ್ರವೇ 2 ಸಾವಿರ ರು. ತಲುಪಿದ್ದು, ಉಳಿದ 17 ಸಾವಿರ ಮಂದಿ ಗೃಹಲಕ್ಷ್ಮಿಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ- ಕುಟುಂಬಸ್ಥರ ಪ್ರತಿಭಟನೆ

ಗೃಹಲಕ್ಷ್ಮಿ ಯೋಜನೆ ಆರಂಭವಾದ ಕೆವೈಸಿ ಮಾಡಿಸದ, ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಿಸದ ಹಾಗೂ ಹೆಸರುಗಳ ಹೊಂದಾಣಿ ಆಗದ, ಪಡಿತರ ಚೀಟಿಯಲ್ಲಿ ಯಜಮಾನಿ ಆಗಿರದ ಮಹಿಳೆಯರು ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಈಗಾಗಲೇ ಸೇವಾ ಕೇಂದ್ರಗಳಿಗೆ ಮುಗಿ ಬೀಳುತ್ತಿದ್ದಾರೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಸಕಾಲದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈಗಾಗಲೇ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಬದಲಾವಣೆ ಮಾಡಿಕೊಂಡವರ ಹೆಸರುಗಳು ಅಪಡೇಟ್‌ ಆಗಿ, ಹೊಸ ಪಡಿತರ ಚೀಟಿ ಬಾರದೇ ಇರುವುದರಿಂದಲೂ ಗೃಹಲಕ್ಷ್ಮಿಗೆ ನೋಂದಣಿ ಸಾಧ್ಯವಾಗುತ್ತಿಲ್ಲ. ಇವೆಲ್ಲಾ ಸಮಸ್ಯೆಗಳಿಂದಾಗಿ 17 ಸಾವಿರ ಮಂದಿಗೆ ಗೃಹಲಕ್ಷ್ಮಿ ಭಾಗ್ಯ ಕೈಗೆಟುಕದಂತಾಗಿದೆ.

RELATED ARTICLES

Related Articles

TRENDING ARTICLES