Sunday, May 19, 2024

ವಿರಾಟ್-ಜಡ್ಡು ಅಬ್ಬರ : ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಬೆಂಗಳೂರು : ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತ 4 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ 20 ವರ್ಷಗಳ ನಂತರ ವಿಶ್ವಕಪ್‌ನಲ್ಲಿ ಕಿವೀಸ್‌ ಅನ್ನ ಭಾರತ ಮಣಿಸಿತು.

ನ್ಯೂಜಿಲೆಂಡ್ ನೀಡಿದ್ದ 274 ರನ್​ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತ 48 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಈ ಮೂಲಕ ವಿಶ್ವಕಪ್ 2023 ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿತು.

ಭಾರತದ ಪರ ರನ್ ಮೆಷಿನ್ ವಿರಾಟ್ ಕೊಹ್ಲಿ ಬೊಂಬಾಟ್ ಅರ್ಧಶತಕ (95) ಸಿಡಿಸಿ ಮಿಂಚಿದರು. ಕೇವಲ 5 ರನ್​ಗಳಿಂದ ಶತಕ ವಂಚಿತರಾದರು.  ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ 46, ಶುಭ್​ಮನ್ ಗಿಲ್ 26, ಶ್ರೇಯಸ್ ಅಯ್ಯರ್ 33, ಕೆ.ಎಲ್ ರಾಹುಲ್ 27 ಹಾಗೂ ರವೀಂದ್ರ ಜಡೇಜಾ ಅಜೇಯ 39 ರನ್​ ಸಿಡಿಸಿದರು. ನ್ಯೂಜಿಲೆಂಡ್ ಪರ ಲೂಕಿ ಫರ್ಗ್ಯೂಸನ್ 2, ಬೋಲ್ಟ್ ಹಾಗೂ ಮಿಚೆಲ್ ಸ್ಯಾಂಟ್ನರ್ ತಲಾ ಒಂದು ವಿಕೆಟ್ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ನಿಗದಿತ 50 ಓವರ್​ಗಳಲ್ಲಿ 10 ವಿಕೆಟ್ ನಷ್ಟಕ್ಕೆ 273 ರನ್​ ಕಲೆಹಾಕಿತು. ಮಿಚೆಲ್ 127 ಎಸೆತಗಳಲ್ಲಿ 130 ರನ್ ಚಚ್ಚಿದರು. ಇದರಲ್ಲಿ 9 ಬೌಂಡರಿ ಹಾಗೂ 5 ಬೊಂಬಾಟ್ ಸಿಕ್ಸರ್ ಸೇರಿದ್ದವು. ರಚಿನ್ ರವೀಂದ್ರ 75, ಫಿಲಿಪ್ಸ್ 23 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್, ಕುಲ್​ದೀಪ್ ಯಾದವ್ 2, ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

RELATED ARTICLES

Related Articles

TRENDING ARTICLES