ಬೆಂಗಳೂರು : ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಹಬ್ಬದ ಗಿಫ್ಟ್ ನೀಡಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ. 35 ರಿಂದ ಶೇ. 38.75ಕ್ಕೆ ಹೆಚ್ಚಿಸಿ ಶನಿವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕಾಲಜ್ಞಾನ ಪ್ರಕಾರ ಮೈಸೂರು ದಸರಾ ಹಬ್ಬಕ್ಕೆ ಕಂಟಕ!
ಈ ಕುರಿತಾಗಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ UGC, AICTE, ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.