Sunday, December 22, 2024

150 ಕೋಟಿ ರೂ. ವೆಚ್ಚದಲ್ಲಿ ಮಹಾರಾಣಿ ಕಾಲೇಜು, ಹಾಸ್ಟೆಲ್‌ ಕಾಮಗಾರಿ: ಸಿಎಂ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.

ಇದನ್ನೂ ಓದಿ: ಕಾಲಜ್ಞಾನ ಮಠದ ವಿಜಯದಶಮಿ ಮಹೋತ್ಸವಕ್ಕೆ ಭಕ್ತರನ್ನು ಆಹ್ವಾನಿಸಿದ ಶ್ರೀಗಳು!

51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆರ್ಟ್ಸ್​ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES