Sunday, December 22, 2024

ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್​​!

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ.

ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ. ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ದಸರಾ ಉತ್ಸವ: ಸಿಡಿಮದ್ದು ತಾಲೀಮು ವೇಳೆ ಅವಘಡ!, ನಿಜವಾಯ್ತಾ ಕಾಲಜ್ಞಾನ ಭವಿಷ್ಯ!?

ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ವಿಡಿಯೋ ಕೇಸ್ ಹಾಕಲಾಗಿದೆ. ಬಂಧಿತ ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ. ಇಂದು ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಬೆಂಗಳೂರು ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES