ಮೈಸೂರು: ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ 3 ದಿನಗಳ ಕಾಲ ಪ್ರವಾಸ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಇಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮೈಸೂರು ಮಹಾರಾಣಿ ಕಾಲೇಜಿನ ಸುತ್ತಲೂ ಶಿಥಿಲಗೊಂಡಿರುವ ಕಟ್ಟಡಗಳನ್ನ ಪರಿಶೀಲಿಸಿದ್ದಾರೆ. ಇನ್ನು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನವನ್ನ ವೀಕ್ಷಣೆ ಮಾಡಲಿದ್ದಾರೆ. ಇನ್ನು ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ತೆರಳ ಚಾಮುಂಡಿ ದರ್ಶನ ಪಡೆಯಲಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಸಿಎಂ ಸಿದ್ದರಾಮಯ್ಯ
ಅ.24 ಮಧ್ಯಾಹ್ನ 1.46ಕ್ಕೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿ ಸಂಜೆ 4.40ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 7.30ಕ್ಕೆ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ಅ.25ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಅ.25ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.