ಬೆಂಗಳೂರು: ಕಲ್ಯಾಣ ಕರ್ನಾಟಕದ ಪ್ರತಿಷ್ಠಿತ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರು ವಿಧಾನಸೌಧಕ್ಕೆ ತಲುಪಿರುವ ಹಿನ್ನೆಲೆಯಲ್ಲಿ 93 ಹುದ್ದೆಗಳ ನೇಮಕಾತಿ ಪಟ್ಟಿಯನ್ನು ಸರ್ಕಾರ ತಡೆಹಿಡಿದಿದೆ.
ಹಿಂದಿನ ಬಿಜೆಪಿ ಸರ್ಕಾರ ವಿಮ್ಸ್ನಲ್ಲಿ 93 ಹುದ್ದೆಗಳ ನೇಮಕಾತಿ ಒಪ್ಪಿಗೆ ನೀಡಿತ್ತು. ಜೂನ್ನಲ್ಲಿ ಸಂದರ್ಶನ ನಡೆಸಿ ಜುಲೈನಲ್ಲಿ ಆಯ್ಕೆ ಪಟ್ಟಿಯನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿತ್ತು. ಬದಲಾದ ಪರಿಸ್ಥಿತಿಯಲ್ಲಿ ಅಧಿಕಾರ ಹಿಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಯ್ಕೆ ಪಟ್ಟಿಗೆ ತಡೆ ನೀಡಿದೆ.
ಇದನ್ನೂ ಓದಿ: ಮಾಜಿ ಸ್ಪೀಕರ್ ಆಪ್ತನ ಬರ್ಬರ ಕೊಲೆ!
ನೇಮಕಾತಿ ಅನುಮತಿ ಪಡೆಯಲು ವಿಮ್ಸ್ ನಿರ್ದೇಶಕ ಟಿ.ಗಂಗಾಧರ ಗೌಡ ಬೆಂಗಳೂರಿಗೆ ಭೇಟಿ ನೀಡಿದರು. ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರುಗಳಿವೆ. ಹೀಗಾಗಿ ನೇಮಕಾತಿ ಪಟ್ಟಿಗೆ ಅನುಮೋದನೆ ಕೊಡಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.