Saturday, August 23, 2025
Google search engine
HomeUncategorizedಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಸಿಎಂ ಸಿದ್ದರಾಮಯ್ಯ

ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.

ಅವರು ಇಂದು ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರಿಗೆ ಮಾತನಾಡಿದರು. ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.

ಇದನ್ನೂ ಓದಿ: ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್​​!

ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯ ತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments