Sunday, April 28, 2024

ಪಾಕಿಸ್ತಾನಕ್ಕೆ ಹ್ಯಾಟ್ರಿಕ್ ಸೋಲು : ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಗೆಲುವು

ಚೆನ್ನೈ : ವಿಶ್ವಕಪ್​-2023 ಟೂರ್ನಿಯಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಹೊಮ್ಮಿದೆ. ಪಾಕಿಸ್ತಾನ ವಿರುದ್ಧ ಅಫ್ಘಾನಿಸ್ತಾನ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಈ ಮೂಲಕ ಟೂರ್ನಿಯಲ್ಲಿ ಪಾಕ್​ ಹ್ಯಾಟ್ರಿಕ್​ ಸೋಲು ಅನುಭವಿಸಿತು.

ಚೆನ್ನೈನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಪಾಕ್ ಲೆಕ್ಕಾಚಾರವನ್ನ ಅಫ್ಘಾನಿಸ್ತಾನ ತಲೆಕೆಳಗಾಗಿಸಿತು.

ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್​ ಕಲೆಹಾಕಿತ್ತು. 283 ರನ್​ಗಳ ಕಠಿಣ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ 49 ಓವರ್​ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಜದ್ರಾನ್, ಗುರ್ಬಾಜ್ ಬೊಂಬಾಟ ಆಟ

ಅಘ್ಫಾನಿಸ್ತಾನದ ಪರ ಇನ್ನಿಂಗ್ಸ್ ಆರಂಭಿಸಿದ ಇಬ್ರಾಹಿಂ ಜದ್ರಾನ್ ಹಾಗೂ ಗುರ್ಬಾಜ್ ಪಾಕ್​ ಬೌಲರ್​ಗಳನ್ನು ಯಮನಂತೆ ಕಾಡಿದರು. ಇಬ್ಬರೂ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಬಳಿಕ ಬಂದ ರಹಮತ್​ ಶಾ ಹಾಗೂ ನಾಯಕ ಹಶ್ಮತುಲ್ಲಾ ಶಾಹಿದಿ ಅಜೇಯರಾಗಿ ಉಳಿದುಕೊಂಡು ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಎರಡನೇ ಗೆಲುವು ಸಾಧಿಸಿತು.

RELATED ARTICLES

Related Articles

TRENDING ARTICLES