ಬೆಂಗಳೂರು: ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ : ನಟ ದರ್ಶನ್
ಅಕ್ಟೋಬರ್ 23 ಮತ್ತು ಅಕ್ಟೋಬರ್ 24ರಂದು ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.