Monday, December 23, 2024

ಆರ್ಮುಗ ರವಿಶಂಕರ್ ಪುತ್ರ ಈಗ ಹೀರೋ : ಮಗನ ಸಿನಿಮಾಗೆ ಅಪ್ಪನೇ ನಿರ್ದೇಶಕ

ಬೆಂಗಳೂರು : ಸ್ಯಾಂಡಲ್‌ವುಡ್‌ನ ಆರ್ಮುಗಂ ರವಿಶಂಕರ್ ಪುತ್ರ ಅದ್ವೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪುತ್ರ ಅದ್ವೆ (ಅದ್ವಯ್) ಸಿನಿಮಾಗೆ ಸ್ವತಃ ರವಿಶಂಕರ್ ಚಿತ್ರಕಥೆ ಕೂಡ ಮಾಡಿಕೊಂಡಿದ್ದಾರೆ.

ರವಿಶಂಕರ್ ನಟ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದ ಇವರು ನಂತರ ಒಂದೊಂದೆ ಮೆಟ್ಟಿಲುಗಳನ್ನೇರುತ್ತಾ ನಟನಾಗುವ ತಮ್ಮ ಕನಸನ್ನ ಈಡೇರಿಸಿಕೊಂಡರು.

ಕಿಚ್ಚ ಸುದೀಪ್ ನಟನೆಯ ಕೆಂಪೇಗೌಡ ಸಿನಿಮಾದಲ್ಲಿ ಆಮುರ್ಗಂ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದರು. ಕೆಂಪೇಗೌಡ ಸಿನಿಮಾದಿಂದ ರವಿಶಂಕರ್ ಸಿನಿಮಾ ಜೀವನವೇ ಬದಲಾಯ್ತು. ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ.

ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ಇದೀಗ, 20 ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ. ಅದು ಪುತ್ರನ ಸಿನಿಮಾಗೆ ಅನ್ನೋದು ವಿಶೇಷ.

ಸುಬ್ರಹ್ಮಣ್ಯ ಎಂಬ ಕ್ಯಾಚಿ ಟೈಟಲ್

ಆರ್ಮುಗ ರವಿಶಂಕರ್ ಅವರಿಗೆ ಅದ್ವೆ  ಎಂಬ ಮಗನಿದ್ದಾರೆ. ವಿದೇಶದಲ್ಲಿ ನಟನಾ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಪುತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ರವಿಶಂಕರ್ ಮುಂದಾಗಿದ್ದಾರೆ. ಇಂದು ಆಯುಧಪೂಜೆ ಅಂಗವಾಗಿ ಅದ್ವೆ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ‌ ಮಾಡಲಾಗಿದೆ. ಈ ಚಿತ್ರಕ್ಕೆ ಸುಬ್ರಹ್ಮಣ್ಯ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

ರವಿ ಬಸ್ರೂರ್ ಸಂಗೀತ

ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದಾರೆ. ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದ್ದು, ಡಿಸೆಂಬರ್ ನಿಂದ ಶೂಟಿಂಗ್ ಆರಂಭವಾಗಲಿದೆ.

RELATED ARTICLES

Related Articles

TRENDING ARTICLES