Sunday, January 19, 2025

ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ 5 ಲಕ್ಷ ಸಾಲ ಸೌಲಭ್ಯ : ಸಿದ್ದರಾಮಯ್ಯ

ಬೆಂಗಳೂರು : ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರವು ಸ್ತ್ರೀ ಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES