Thursday, January 23, 2025

ಜಂಬೂ ಸವಾರಿ : ಈ ಬಾರಿ 49 ಸ್ತಬ್ಧ ಚಿತ್ರಗಳು ಪ್ರದರ್ಶನ

ಮೈಸೂರು : ಜಂಬೂಸವಾರಿ ಮೆರವಣಿಗೆಯಲ್ಲಿ ಇಂದು ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಲಿದೆ. ಜಾನಪದ ಕಲಾತಂಡಗಳು, ಅಶ್ವಾರೋಹಿ, ಪೊಲೀಸ್ ತಂಡ, NCC, ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ ತಂಡಗಳೂ ಪ್ರದರ್ಶನದಲ್ಲಿ ಭಾಗವಹಿಸಲಿವೆ.

ಈ ಬಾರಿ ಮೈಸೂರು ಸೇರಿದಂತೆ ರಾಜ್ಯದ 31 ಜಿಲ್ಲಾ ಪಂಚಾಯಿತಿಗಳು ಮತ್ತು ವಿವಿಧ ಇಲಾಖೆಗಳ 14, ಇನ್ನಿತರೆ ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಇರಲಿವೆ. ಪ್ರವಾಸಿಗರು, ಸಾರ್ವಜನಿಕರನ್ನು ಆಕರ್ಷಿಸಲು ಉತ್ತಮ ರೀತಿಯಲ್ಲಿ ಸ್ತಬ್ಧಚಿತ್ರಗಳನ್ನು ತಯಾರಿಸಲಾಗಿದೆ.

ಆಯಾ ಜಿಲ್ಲೆಯ ಪ್ರಾಕೃತಿಕ, ಭೌಗೋಳಿಕ ಮತ್ತು ಐತಿಹಾಸಿಕ ವಿಶೇಷತೆಯನ್ನೂಳಗೊಂಡ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಸಮಿತಿ ರೆಡಿಯಾಗಿದೆ. ಕರ್ನಾಟಕ ಹಾಲು ಒಕ್ಕೂಟದಿಂದ ಕ್ಷೀರಭಾಗ್ಯ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ಕರ್ನಾಟಕ ಪುಣ್ಯಕೋಟಿ ದತ್ತು ಯೋಜನೆಯನ್ನು ಬಿಂಬಿಸುವ ಸ್ತಬ್ಧಚಿತ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಮಾಹಿತಿ ಒಳಗೊಂಡ ಸ್ತಬ್ಧಚಿತ್ರ ಇರಲಿವೆ.

ಯದುವೀರ್ ವಿಜಯ ಯಾತ್ರೆ

ಮೈಸೂರು ಅರಮನೆಯಲ್ಲಿ ದಸರಾ ಸಡಗರ ಕಳೆಗಟ್ಟಿದೆ. ಬೆಳಗ್ಗೆ 6ರಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಬೆಳಗ್ಗೆ 9ಕ್ಕೆ ಅರಮನೆ ಅಂಬಾವಿಲಾಸ ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಬೆಳಗ್ಗೆ 9.30ಕ್ಕೆ ರಾಜರ ಬೆಳ್ಳಿ ರಥಕ್ಕೆ ಪೂಜೆ ಮಾಡಲಾಯಿತು. ಬೆಳಗ್ಗೆ 11ಗಂಟೆಗೆ ಯದುವೀರ್ ವಿಜಯ ಯಾತ್ರೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಭುವನೇಶ್ವರಿ ದೇವಸ್ಥಾನದಲ್ಲಿ ಯದುವೀರ್ ಬನ್ನಿಪೂಜೆ ಮಾಡಲಿದ್ದಾರೆ. ಅದರೊಂದಿಗೆ ಅರಮನೆಯ ದಸರಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

RELATED ARTICLES

Related Articles

TRENDING ARTICLES