Wednesday, January 22, 2025

ಸರ್ಕಾರವನ್ನು ತೆಗೆದಿದ್ದು ನಾನೇ ಎನ್ನಲು ಗುಂಡಿಗೆ ಸಾಲದೇ? : ಕುಮಾರಸ್ವಾಮಿ

ಬೆಂಗಳೂರು : ಕುಣಿಯಲಾರದವರಿಗೆ ನೆಲ ಡೊಂಕು ಎಂದು ಲೇವಡಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವಿಜಯದಶಮಿ ದಿನದಂದು ಬೆಳ್ಳಂಬೆಳಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ, ಕುಣಿಯಲು ಬಿಟ್ಟು ನೆಲ ಅಗೆಯುವ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು? ದೋಖಾ ದುರುದ್ದೇಶವಾಗಿದ್ದಾಗ ನೆಲ ಡೊಂಕು ಮಾಡುವುದು ಕಷ್ಟವೇ? ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಚಾಟಿ ಬೀಸಿದ್ದಾರೆ. ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ ಎಂದು ಟ್ವೀಟ್​ ಮಾಡಿದ್ದಾರೆ.

ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ?

ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES