Friday, September 20, 2024

ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ

ಶಿವಮೊಗ್ಗ : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ.

ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ ಮೂಡಿತ್ತು. ಕುಂತಿ ಈಚೆಗೆ ಮರಿ ಹಾಕಿತ್ತು. ಭಾನುಮತಿ ತುಂಬು ಗರ್ಭಿಣಿಯಾಗಿತ್ತು. ಹಾಗಾಗಿ ಸಾಗರ ಆನೆ ಜತೆ ನೇತ್ರಾವತಿ, ಹೇಮಾವತಿ ಆನೆಗಳನ್ನು ಕಳುಹಿಸಲಾಗಿತ್ತು.

ಕಳೆದ 15 ದಿನಗಳಿಂದ ಸಕ್ರೆಬೈಲು ಆನೆ ಬಿಡಾರದಲ್ಲಿ ತಾಲೀಮು ಸಹ ನಡೆದಿತ್ತು. ಮೂರು ದಿನದ ಹಿಂದೆ ಶಿವಮೊಗ್ಗ ನಗರಕ್ಕೆ ಕರೆತಂದು ಮೆರವಣಿಗೆ ಮಾರ್ಗದಲ್ಲಿ ಬೆಳಗ್ಗೆ ಸಂಜೆ ತಾಲೀಮು ನಡೆಸಲಾಗುತಿತ್ತು. ನಿನ್ನೆ ಸಂಜೆ ಕೂಡ ತಾಲೀಮು ಮುಗಿಸಿ ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿದ್ದವು. ರಾತ್ರಿ 10 ಗಂಟೆ ಸುಮಾರಿಗೆ ನೇತ್ರಾವತಿ ಮರಿಗೆ ಜನ್ಮ ನೀಡಿದ್ದಾಳೆ. ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಹಾಗೂ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ಭೇಟಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES