Wednesday, January 22, 2025

ಇಂದು ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ಫೈಟ್ : ವಿಜಯಲಕ್ಷ್ಮಿ ಯಾರಿಗೆ?

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಇಂದು ನಡೆಯಲಿರುವ 23ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳು ಸೆಣೆಸಾಟ ನಡೆಸಲಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಆಫ್ರಿಕಾ ಮೂರು ಗೆಲುವು, ಒಂದು ಸೋಲಿನೊಂದಿಗೆ 6 ಅಂಕ ಪಡೆದು ಮೂರನೇ ಸ್ಥಾನದಲ್ಲಿದೆ. ಇತ್ತ, ಬಾಂಗ್ಲಾದೇಶ ಮೂರು ಪಂದ್ಯಗಳಲ್ಲಿ ಸೋಲುಂಡು 6ನೇ ಸ್ಥಾನದಲ್ಲಿದೆ. ಹರಿಣಗಳು ಇಂದಿನ ಪಂದ್ಯ ಗೆದ್ದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಬಡ್ತಿ ಪಡೆಯಲಿದೆ.

ದಕ್ಷಿಣ ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್​ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ

ಬಾಂಗ್ಲಾದೇಶ ತಂಡ

ಶಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್, ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲ

RELATED ARTICLES

Related Articles

TRENDING ARTICLES