Wednesday, January 22, 2025

ಚಿನ್ನ ಕಳ್ಳಸಾಗಣೆ; ಇಬ್ಬರ ಬಂಧನ!

ಬೆಂಗಳೂರು: ವಿದೇಶಗಳಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಮೂರು ಕೆ.ಜಿ ಚಿನ್ನ ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆ ವೇಳೆ ಚಿನ್ನ ಪತ್ತೆಯಾಗಿದೆ. 1.76 ಕೋಟಿ ಮೌಲ್ಯದ ಚಿನ್ನದ ಗಟ್ಟಿ ಹಾಗೂ ಚಿನ್ನದ ಸರ ಪತ್ತೆಯಾಗಿದೆ. ನಾಲ್ವರು ಪ್ರಯಾಣಿಕರ ತಪಾಸಣೆ ವೇಳೆ ಚಿನ್ನ ಪತ್ತೆ‌ಯಾಗಿದೆ.

ಇದನ್ನೂ ಓದಿ: ದಸರಾ ಮುಕ್ತಾಯ: K.R. ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ!

ಪ್ರಯಾಣಿಕರು ಕೌಲಾಲಂಪುರ, ದುಬೈ ಮತ್ತು ಕೊಲಂಬೊದಿಂದ ಬಂದಿದ್ದರು. ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

RELATED ARTICLES

Related Articles

TRENDING ARTICLES