ಚಿಕ್ಕಬಳ್ಳಾಪುರ: ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆದುರ್ಘಟನೆ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ 13 ಮಂದಿ ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಆಂಧ್ರಪ್ರದೇಶದ ಪೆರಿಮಾಳ್ ಪವನ್ ಕುಮಾರ್, ಬೆಂಗಳೂರಿನ ಸುಬ್ಬಮ್ಮ ಕಾಮಾಕ್ಷಿಪಾಳ್, ಬಾಗೇಪಲ್ಲಿಯ ನರಸಿಂಹಮೂರ್ತಿ,
ಸೇರಿದಂತೆ 13 ಮಂದಿ ಸಾವನಪ್ಪಿದ್ದಾರೆ.
ಇದನ್ನೂ ಓದಿ: ಟವಲ್ ನಿಂದ ಸುತ್ತಿ ವೃದ್ದೆಯ ಕೊಂದ ದುಷ್ಕರ್ಮಿಗಳು!
ಟಾಟಾ ಸುಮೊ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಬೆಳ್ಳಂ ಬೆಳಗ್ಗೆ ದಟ್ಟ ಮಂಜು ಇದ್ದ ಕಾರಣ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸರ್ವಿಸ್ ರಸ್ತೆ ಇಲ್ಲವಾದ್ದರಿಂದ ಅಪಘಾತ:
ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾದ್ಯಮದೊಂದಿಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಕೆಲಸ ಮಾಡ್ತೀವಿ. ಶೀಘ್ರದಲ್ಲೇ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಆಗುತ್ತೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸರ್ವಿಸ್ ರಸ್ತೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ. ಸಂಬಂಧಪಟ್ಟವರ ಜೊತೆಗೆ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದ ಕುರಿತು ಚರ್ಚೆ ಮಾಡ್ತೀನಿ ಎಂದು ಅವರು ಹೇಳಿದರು.