Wednesday, January 22, 2025

ಹುಲಿ ಉಗುರು ಪ್ರಕರಣ: ತಲೆತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದಿಲ್ಲ- ನಟ ಜಗ್ಗೇಶ್​ ಟ್ವೀಟ್​

ಬೆಂಗಳೂರು: ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತುಗಳನ್ನು ಒಪ್ಪಿಸಲಾಗಿದೆ ಎಂದು ಜಗ್ಗೇಶ್​​ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ, ಪಾಚ್ಕೊಳಿ ಎಂದು ಜಗ್ಗೇಶ್​ ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ನಿಮ್ಮನ್ನು ಅಮಿತ್​ ಶಾ ಗೆ ಅಡ ಇಡ್ತಾರೆ : ಸಿ.ಎಂ.ಇಬ್ರಾಹಿಂ!

ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೇಡುಕುಬಯಸಿ ಬಾಳಿದರೆ ನಾಶ ಎಂದು ಬರೆದಿದ್ದಾರೆ.

RELATED ARTICLES

Related Articles

TRENDING ARTICLES