Sunday, November 3, 2024

ಅರ್ಹತೆ ಮತ್ತು ಪ್ರತಿಭೆಗೆ ಅವಕಾಶ ನೀಡಿ ಪ್ರಶಸ್ತಿಗೆ ಆಯ್ಕೆಮಾಡಿ: ಸಿಎಂ ಸೂಚನೆ!

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ 13 ಮಂದಿ ಸಾವು!

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿ ಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES

Related Articles

TRENDING ARTICLES