Sunday, December 22, 2024

ರಾಮನಗರ ಜಿಲ್ಲೆ ವಿವಾದ ನಡುವೆ ವಿಜಯಪುರ ಜಿಲ್ಲೆ ಹೆಸರು ಬದಲಾವಣೆಗೆ ಹೆಚ್ಚಿದ ಕೂಗು!

ವಿಜಯಪುರ: ರಾಮನಗರವನ್ನು ಬೆಂಗಳೂರಿಗೆ ಸೇರಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳ್ತಿದ್ದಂತೆ ಜಿಲ್ಲೆಗಳ ಹೆಸರು ಬದಲಾವಣೆ ಕೂಗು ಜೋರಾಗಿದೆ.

ಈ ಹಿಂದೆ ಜೆಡಿಎಸ್​ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಬೆಂಗಳೂರು ಜಿಲ್ಲೆಗೆ ಹೊಂದಿಕೊಂಡಿದ್ದ ರಾಮನಗರವನ್ನು ಪತ್ಯೇಕ ಮಾಡಿದ್ದಾರೆ. ಇದುವರೆಗೂ ರಾಮನಗರ ಅಭಿವೃದ್ದಿ ಕಂಡಿಲ್ಲ ಈ ಹಿನ್ನೆಲೆಯಲ್ಲಿ ರಾಮನಗರವನ್ನು ಮತ್ತೆ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸೇರಿಸಲು ತಯಾರಿ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದರು.

ಇದನ್ನೂ ಓದಿ:  ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲು ಭಾರತ ಬಳಕೆ!

ರಾಮನಗರ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎನ್ನುವ ಕೂಗು ಕೇಳಿ ಬರುತ್ತಲೇ ರಾಜ್ಯದ ವಿಜಯಪುರ ಜಿಲ್ಲೆಯ ಹೆಸರನ್ನು ಬಸವೇಶ್ವರ ಜಿಲ್ಲೆ ಎಂದು ಬದಲಾಯಿಸುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಹಲವು ಮುಖಂಡರು ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ವಿಜಯಪುರ ಜಿಲ್ಲಾಡಳಿತ ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

RELATED ARTICLES

Related Articles

TRENDING ARTICLES