Wednesday, January 22, 2025

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ!

ಬೆಂಗಳೂರು : ಹುಲಿ ಉಗುರು ಪೆಂಡೆಂಟ್​ ಧರಿಸಿ ಬಂಧನಕ್ಕೊಳಗಾಗಿರುವ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್ ವಿಚಾರಣೆ ನಡೆಸಿರುವ ನ್ಯಾಯಾಲಯ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

ಬೆಂಗಳೂರಿನ 2ನೇ ಸಿಎಜೆಎಂ ನ್ಯಾಯಾಲಯದಲ್ಲಿ ಹುಲಿ ಉಗುರಿನ ಪೆಂಡೆಂಟ್​ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

ಇದನ್ನೂ ಓದಿ:ಬೆಂಗಳೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ  

ಬಿಗ್​ ಬಾಸ್​ ಕನ್ನಡ ಸೀಸನ್​ 10 ರ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್​ ಇತ್ತೀಚಿಗೆ  ಹುಲಿ ಉಗುರು ಧರಿಸಿರುವ ಭಾವಚಿತ್ರ ಎಲ್ಲೆಡೆ ಹರಿದಾಡಿ ವೈರಲ್ ಆಗಿತ್ತು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಬಿಗ್​ ಬಾಸ್​ ಶೋ ನಡುವೆಯೇ ಸ್ಪರ್ಥಿಯಾಗಿದ್ದ ವರ್ತೂರ್​ ಸಂತೋಷ್​ ನನ್ನು ಬಂಧಿಸಿ ಪರಪ್ಪನ ಜೈಲಿಗೆ ಕಳಿಸಿದ್ದಾರೆ.

ವರ್ತೂರು ಸಂತೋಷ್​ ಬಂಧನದ ಬೆನ್ನಲ್ಲೇ ಸ್ಯಾಂಡಲ್​ವುಡ್​ನ ಹಿರಿಯ ನಟರಿಂದ ಹಿಡಿದು ಹಲವು ಸೆಲೆಬ್ರಿಟಿಗಳ ಮನೆಗಳ ಮೇಲೂ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಜೊತೆಗೆ ನಟ ದರ್ಶನ್, ನಿಖಿಲ್, ಜಗ್ಗೇಶ್​ ಬಳಿ ಇದ್ದ ಪೆಂಡೆಂಟ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:

ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES