Wednesday, January 22, 2025

ಹುಲಿ ಉಗುರು ಪೆಂಡೆಂಟ್​: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಸಂಕಷ್ಟ!

ಬೆಂಗಳೂರು: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್​ಗೂ ಸಂಕಷ್ಟ ಶುರುವಾಗಿದೆ.

ಮೃಣಾಲ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮದುವೆ, ಮತ್ತಿತರೆ ಸಮಾರಂಭಗಳಲ್ಲಿ ಲಾಕೆಟ್ ಧರಿಸಿದ್ದ ಫೋಟೋ ವೈರಲ್​ ಆಗಿದೆ. ಹುಲಿಯ 1 ಉಗುರು ಇರುವ ಲಾಕೆಟ್ ಧರಿಸುತ್ತಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ!

ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದರೂ ಬೆಳಗಾವಿ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆ. ಈ ಕುರಿತಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್​ ಯಾವುದೇ ಪ್ರತಿಕ್ರಿಯೆ ನೀಡಿಲ್.

RELATED ARTICLES

Related Articles

TRENDING ARTICLES