ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ನಗರದಲ್ಲಿ ಬೆಳ್ಳಂ ಬೆಳಗ್ಗೆ ಜೆಸಿಬಿಗಳ ಘರ್ಜನೆ ಶುರುವಾಗಿದೆ. ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿನ ಅಕ್ರಮ ವಾಣಿಜ್ಯ ಕಟ್ಟಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ವಿಚಾರವಾಗಿ 1990ರಿಂದ ಎಂಟಿಬಿ ನಾಗರಾಜ್ ಬೆಂಬಲಿಗ, ಬಿಜೆಪಿ ಮುಖಂಡ ಮೋಹನ್ ರವಿ ಹಾಗೂ ಅರಣ್ಯ ಇಲಾಖೆ ನಡುವೆ ವ್ಯಾಜ್ಯ ನಡೆಯುತ್ತಿದೆ.
ಇದನ್ನೂ ಓದಿ: ಏಕಾಏಕಿ ಎಲ್ಲರನ್ನೂ ಬಂಧಿಸುವುದು ಸರಿಯಲ್ಲ : ಅರಗ ಜ್ಞಾನೇಂದ್ರ ಗರಂ
ಇದೀಗ ನ್ಯಾಯಾಲಯ ಅರಣ್ಯ ಇಲಾಖೆ ಪರ ಆದೇಶ ನೀಡಿದೆ. ಆದೇಶ ಹಿನ್ನೆಲೆಯಲ್ಲಿ ಇದೀಗ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ. ಪೊಲೀಸ್ ಭದ್ರತೆಯಲ್ಲಿ ವಾಣಿಜ್ಯ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.