Thursday, January 23, 2025

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ರವಿಕುಮಾರ್ ಗಣಿಗ

ದಾವಣಗೆರೆ: ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಾಣಿಗ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ರವಿಕುಮಾರ್, ಅವರು ರಾಜ್ಯಾಧ್ಯಕ್ಷರಾಗಿ ಪಕ್ಷಕ್ಕಾಗಿ ದುಡಿದಿದ್ದಾರೆ. ಹೈಕಮಾಂಡ್​​ನಲ್ಲಿ ಏನು ತೀರ್ಮಾನ ಆಗಿದೆಯೋ ಗೊತ್ತಿಲ್ಲ. ಆದರೆ ಸಿಎಂ ಆಗೋದು ಮಾತ್ರ ಖಚಿತ ಎಂದು ಹೇಳಿದರು. ಈಗಿರುವ ಸಿಎಂ ಒಳ್ಳೆಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಸುಮ್ಮನೆ ಬಿಜೆಪಿಯವರು ಇಲ್ಲಸಲ್ಲದ ಹೇಳ್ಕೊಂಡು ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಳುವಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ!

ನಮ್ಮ ಸರ್ಕಾರ 5 ಕಲ್ಯಾಣ ಯೋಜನೆಗಳನ್ನ ಕೊಟ್ಟಿದ್ದು, ಜನರಿಗೆ ತಲುಪಿವೆ ಎಂದರು. ಈ ಬಾರಿ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಸಂಸದೆ ಸುಮಲತಾ ಅಂಬರೀಶ್ ನಮ್ಮ ಪಕ್ಷದಲ್ಲಿ ಇಲ್ಲ ಬಿಜೆಪಿಗೆ ಹೋಗಿದ್ದಾರೆ. ಹಾಗಾಗಿ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.

RELATED ARTICLES

Related Articles

TRENDING ARTICLES