Wednesday, January 22, 2025

ಆಸ್ಪತ್ರೆಯಲ್ಲಿ ಕಳುವಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ!

ಕೋಲಾರ: ನಗರದ SNR ಜಿಲ್ಲಾಸತ್ರೆಯಿಂದ ಗುರುವಾರ ಸಂಜೆ ಮಹಿಳೆಯರು ಅಪಹರಿಸಿದ್ದ ಶಿಶುವನ್ನು ತಮಿಳುನಾಡಿನಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮೂವರು ಮಹಿಳೆಯರು ನವಜಾತ ಗಂಡು ಶಿಶುವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ಆಟೊದಲ್ಲಿ ಪರಾರಿಯಾದ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸುಳಿವಿನ ಮೇಲೆ ಕಾರ್ಯಾಚರಣೆ ಕೈಗೊಂಡ ಕೋಲಾರ ವಿಭಾಗದ ಡಿವೈಎಸ್ಪಿ ಮಲ್ಲೇಶ್ ನೇತೃತ್ವದ ತಂಡ ಆರೋಪಿಗಳನ್ನು ಕೇವಲ 6 ಗಂಟೆಗಳೊಳಗೆ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಹೊಸಕೋಟೆಯಲ್ಲಿ ಬೆಳ್ಳಂ ಬೆಳಗ್ಗೆ JCB ಘರ್ಜನೆ: ಅರಣ್ಯ ಪ್ರದೇಶ ಒತ್ತುವರಿ ತೆರವು

ಇನ್‌ಸ್ಪೆಕ್ಟರ್‌ಗಳಾದ ಹರೀಶ್. ವಸಂತ್‌, ಶಂಕರಾಚಾ‌ರ್. ತಾಂತ್ರಿಕ ತಜ್ಞ ನಾಗರಾಜ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು. ಮಾಲೂರು ಪಟ್ಟಣದ ಪಟೇಲರ ಬೀದಿ ನಿವಾಸಿ ನಂದಿನಿ ಹಾಗೂ ಪೂವರಸನ್ ಎಂಬ ದಂಪತಿಗೆ ಸೇರಿದ ಆರು ದಿನಗಳ ಶಿಶು ಇದಾಗಿದೆ.

RELATED ARTICLES

Related Articles

TRENDING ARTICLES