Saturday, May 18, 2024

ಕನ್ನಡ ರಾಜ್ಯೋತ್ಸವವನ್ನು ಹಬ್ಬದ ರೀತಿಯಲ್ಲಿ ವಿಶೇಷವಾಗಿ ಆಚರಿಸಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

ನವೆಂಬರ್ 1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವುದು.

ಇದನ್ನೂ ಓದಿ: ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ; ವಿದ್ಯಾರ್ಥಿ ಖಾಕಿ ವಶಕ್ಕೆ!

ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಬೇಕು.

ನವೆಂಬರ್ 1 ರ ಸಂಜೆ 5.00 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸುವುದು.
ನವೆಂಬರ್ 1 ರ ಸಂಜೆ 7.00 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ’ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.

ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES

Related Articles

TRENDING ARTICLES