Wednesday, January 22, 2025

ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

720 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಶುಕ್ರವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನ ಗಾಮೇವಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ; ವಿದ್ಯಾರ್ಥಿ ಖಾಕಿ ವಶಕ್ಕೆ!

ಅಕ್ಟೋಬರ್ 27ರಂದು ಶಾದಾಬ್ ಖಾನ್ ಎಂಬ ವ್ಯಕ್ತಿ ಈ ಬೆದರಿಕೆ ಈಮೇಲ್ ಅನ್ನು ರವಾನಿಸಿದ್ದು, ತಮ್ಮ ಗಮನಕ್ಕೆ ಹತ್ಯೆ ಬೆದರಿಕೆಯ ವಿಷಯವನ್ನು ಮುಕೇಶ್ ಅಂಬಾನಿ ಅವರ ನಿವಾಸ ಅಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳು ತಂದ ನಂತರ, ಅವರ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES