Friday, November 22, 2024

ಇಂದು ಚಂದ್ರಗ್ರಹಣ ಹಿನ್ನಲೆ ಹಲವು ದೇಗುಲಗಳು ಬಂದ್‌!

ಬೆಂಗಳೂರು: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಂಜೆಯ ಮಹಾಪೂಜೆಯ ಸಮಯ ಬದಲಾಗಿದ್ದು, ದೇವಾಲಯವನ್ನು ಕೆಲವೆಡೆ ಬೇಗನೆ ಬಂದ್‌ ಮಾಡಿದರೆ, ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನವನ್ನು ಸಂಜೆ 6ಕ್ಕೆ ಬಂದ್ ಮಾಡಲಾಗುವುದು. ಅ.29 ರಂದು ಬೆಳಗ್ಗೆ 7.30ರ ನಂತರ ಭಕ್ತಾದಿಗಳ ದರ್ಶನಕ್ಕೆ ತೆರೆಯಲು ನಿರ್ಧರಿಸಲಾಗಿದೆ. ಹುಬ್ಬಳಿಯ ವಿವಿಧ ದೇವಾಲಯಗಳಲ್ಲಿ ಗ್ರಹಣ ಸಂದರ್ಭದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ದೇಶಾದ್ಯಂತ ಈರುಳ್ಳಿ ಬೆಲೆಯಲ್ಲಿ ಬಾರಿ ಏರಿಕೆ: ಶತಕದತ್ತ ಈರುಳ್ಳಿ ದರ?

ಇನ್ನು, ಗ್ರಹಣ ನಿಮಿತ್ತ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಸಂಜೆ 4ರಿಂದ 5.30ರ ತನಕ ಮಾತ್ರ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಅವಕಾಶ ಇದೆ. ಇಡಗುಂಜಿ ವಿನಾಯಕ ದೇವಾಲಯದಲ್ಲಿ ರಾತ್ರಿ 8ಕ್ಕೆ ಮಹಾಪೂಜೆ ನೆರವೇರಲಿದ್ದು, ಮುರ್ಡೇಶ್ವರ ಕ್ಷೇತ್ರದಲ್ಲಿ ಸಂಜೆ 5.30ಕ್ಕೆ ಮಹಾಪೂಜೆ ನಡೆಯಲಿದ್ದು, ನಂತರ ದೇವಾಲಯದ ದ್ವಾರವನ್ನು ಬಂದ್ ಮಾಡಲಾಗುತ್ತದೆ.

ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲನ್ನು ಸಂಜೆ 6 ಗಂಟೆ ನಂತರ ಮುಚ್ಚಲಾಗುತ್ತದೆ. ಮರುದಿನ ಬೆಳಗ್ಗೆ 6.30ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶವಿರಲಿದೆ ಎಂದು ಮುಜರಾಯಿ ಇಲಾಖೆಯ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES