ಯಾದಗಿರಿ: ರಾಜ್ಯದಾದ್ಯಂತ KEAಯ ವಿವಿಧ ಇಲಾಖೆಗಳ ಪರೀಕ್ಷೆ ಹಿನ್ನೆಲೆ ಯಾದಗಿರಿಯಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡ್ತಿದ್ದ ಪರೀಕ್ಷಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ತಿಳಿದು ಬಂದಿದೆ. ಪೊಲೀಸರು ವಿಚಾರಣೆ ವೇಳೆ ನಕಲಿ ಅಭ್ಯರ್ಥಿ ಅನ್ನೋದು ಕಮ್ಫರ್ಮ್ ಮಾಡಿಕೊಂಡಿದ್ದಾರೆ. ಪೊಲೀಸರು ಮೂವರೂ ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ವಾಲ್ಮೀಕಿ ಜಯಂತಿ!
ಪುಟ್ಟು ತಂದೆ ರಾಜಕುಮಾರ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಪುಟ್ಟು ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನು. ಸದ್ಯ ಪೊಲೀಸರು ಯಾದಗಿರಿ SP ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.