Sunday, November 3, 2024

ಅಂಗಡಿ, ಹೋಟೆಲ್​ ಗಳ ಮುಂದೆ ಕ್ಯಾಮರಾ ಅಳವಡಿಸಿ ಇಲ್ಲ ದಂಡ ಕಟ್ಟಿರಿ!

ಬೆಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಜನ ಸೇರುವ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ ಎಂದು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸುರಕ್ಷಾ ಕಾಯ್ದೆ ಪ್ರಕಾರ 100ಕ್ಕೂ ಹೆಚ್ಚು ಸಾರ್ವಜನಿಕರು ಬರುವ ಅಂಗಡಿಗಳು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂಬ ನಿಯಮವಿದೆ. ಹೀಗಾಗಿ ಮಾಲಿಕರಾದವರು ಸಾರ್ವಜನಿಕರು ಹಾಗೂ ತಮ್ಮ ಉದ್ಯೋಗಿಗಳ ಸುರಕ್ಷತೆಯ ಮತ್ತು ರಕ್ಷಣೆಯ ಕ್ರಮ ಕೈಗೊಳ್ಳಲೇಬೇಕು ಎಂದರು.

ಇದನ್ನೂ ಓದಿ: ಟಿಶ್ಯೂ ವಿಚಾರಕ್ಕೆ ಪಾನ್ ಶಾಪ್ ಮಾಲೀಕನಿಂದ ಚೂರಿ ಇರಿತ!

ಸಿಸಿ ಕ್ಯಾಮೆರಾ ಅಳವಡಿಸುವ ವೇಳೆ ಸ್ಥಳೀಯ ಪೊಲೀಸರ ಮಾರ್ಗದರ್ಶನ ಅಗತ್ಯ ಎಂದು ವಿವರಿಸಿದರು.ಒಂದು ವೇಳೆ ಆದೇಶ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES