Wednesday, January 22, 2025

ಭಾರಿ ಅಗ್ನಿ ಅವಘಡ : ಬೆಂಗಳೂರಿನ ವೀರಭದ್ರ ನಗರದಲ್ಲಿ 20ಕ್ಕೂ ಹೆಚ್ಚು ಬಸ್​ಗಳು ಭಸ್ಮ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 20 ಬಸ್​ಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿವೆ. ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 20ಕ್ಕೂ ಖಾಸಗಿ ಬಸ್​ಗಳು ಹೊತ್ತಿ ಉರಿದಿವೆ.

ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಇಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಎರಡು ಅಗ್ನಿ ಶಾಮದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

SV ಕೋಚ್​​​ ತಯಾರಿಕಾ ಘಟಕದಲ್ಲಿ ಘಟನೆ

SV ಕೋಚ್​​​ ತಯಾರಿಕಾ ಘಟಕದಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಪಾರ್ಕಿಂಗ್​​​ ಲಾಟ್​​ನಲ್ಲಿದ್ದ ಬಸ್​ಗಳಿಗೆ ಬೆಂಕಿ ಹೊತ್ತಿಕೊಂಡು ಮುಗಿಲೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES