Sunday, December 22, 2024

ನಾನು ಯಾವತ್ತೂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ : ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು : ಎರಡೂವರೆ ವರ್ಷದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಪರ ಎಂದು ವಸತಿ ಸಚಿವ ಬಿ.ಝಡ್​ ಜಮೀರ್ ಅಹಮದ್ ಖಾನ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ಅಗಿಲ್ಲ. ಇದು ಮಾಧ್ಯಮಗಳ ಸೃಷ್ಟಿ, ಬಿಜೆಪಿಗರು ಏನೇ ತಿಪ್ಪರಲಾಗ ಹಾಕಿದರೂ ಏನು ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ ಇದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಎರಡೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷ ಹೈಕಮಾಂಡ್ ಪಕ್ಷವಾಗಿದೆ. ಈ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಯಾರು ವಿರೋಧ ಮಾಡುವುದಿಲ್ಲ. ಈ ವಿಚಾರದಲ್ಲಿ ನಾವು ನಮ್ಮ ಅಭಿಪ್ರಾಯವನ್ನು ಹೇಳಬಹುದು ಅಷ್ಟೇ ಎಂದು ಹೇಳಿದರು.

ಇವತ್ತು ನಾನು ಸಿದ್ದರಾಮಯ್ಯ ಪರನೇ

ನಾನು ಯಾವತ್ತೂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ. ಇವತ್ತು ನಾನು ಸಿದ್ದರಾಮಯ್ಯ ಪರನೇ ಇದ್ದೇನೆ. ನಾನು ತೀರ್ಮಾನ ತೆಗೆದುಕೊಳ್ಳಲು ಆಗುತ್ತದೆಯೇ? ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

RELATED ARTICLES

Related Articles

TRENDING ARTICLES