ಬೆಳಗಾವಿ : ಬೆಳಗಾವಿಯ ಪಂಚಾಯತ್ ರಾಜ್ ಇಲಾಖೆ ಎಇಇ (AEE) ಎಂ.ಎಸ್. ಬಿರಾದಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, 1 .35 ಕೋಟಿ ನಗದು ಪತ್ತೆಯಾಗಿದೆ.
ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ಮಾಡಲಾಗಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್ಮೆಂಟ್ನಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಬೆಳಗಾವಿ ನಿವಾಸ, ಕಿತ್ತೂರು, ಖಾನಾಪುರದಲ್ಲಿ ಇರುವ ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳ ಮೂರು ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ. ಅತ್ತ ಕಲಬುರಗಿ ಜಿಲ್ಲೆಯ ಟೌನ್ ಪ್ಲ್ಯಾನರ್ರ್ ಅಪ್ಪಾಸಾಹೇಬ್ ಕಾಂಬಳೆ ಮನೆ ಮೇಲೂ ದಾಳಿಯಾಗಿದೆ. ಕಲಬುರಗಿಯ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಇರೋ ಕಾರ್ಖಾನೆ ಮೇಲೆ ದಾಳಿಯಾಗಿದೆ.
ಹಾಸನದಲ್ಲಿ KPTCL ಇಂಜಿನಿಯರ್ಗೆ ಶಾಕ್
ಹಾಸನದಲ್ಲಿ ಕೆಪಿಟಿಸಿಎಲ್ (KPTCL) ಜೂನಿಯರ್ ಇಂಜಿನಿಯರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. KPTCL ಜೂನಿಯರ್ ಹೆಚ್.ಸಿ. ನಾರಾಯಣ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೊಮ್ಮನಾಯಕನಹಳ್ಳಿ ಮನೆ ಹಾಗೂ ಗೋರೂರಿನ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮನೆ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.