Wednesday, January 22, 2025

ಹುಲಿ ಉಗುರು ಪ್ರಕರಣ : ನಟ ಜಗ್ಗೇಶ್​ಗೆ ರಿಲೀಫ್ ನೀಡಿದ ಕೋರ್ಟ್

ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ಜಗ್ಗೇಶ್ ಅವರ ಪರವಾಗಿ ಹೈಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್​ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ.

ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧದ ಕ್ರಮ ಕಾನೂನುಬಾಹಿರವೆಂದು ಜಗ್ಗೇಶ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದರು. ವಾದವನ್ನು ಕೇಳಿದ ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಇದರಿಂದ ಜಗ್ಗೇಶ್​ ಅವರು ನಿರಾಳರಾಗಿದ್ದಾರೆ.

ಪೆಂಡೆಂಟ್ ವಶಕ್ಕೆ ಪಡೆದಿದ್ದ ಅಧಿಕಾರಿಗಳು

ಹುಲಿ ಉಗುರು ಧರಿಸಿದ್ದ ಆರೋಪ ಹಿನ್ನಲೆ ನಟ ಜಗ್ಗೇಶ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಗ್ಗೇಶ್ ಪತ್ನಿ ಪರಿಮಳಾ ಅವರು, ಪೂಜೆ ಮಾಡಿದ್ದ ಇಟ್ಟಿದ್ದ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದರು.

RELATED ARTICLES

Related Articles

TRENDING ARTICLES