Sunday, December 22, 2024

2 ಕೋಳಿ, 2,000 ಹಂಚಿಕೆ : ಶಾಸಕ ಹೆಚ್.ಡಿ. ರೇವಣ್ಣಗೆ ಮತ್ತೆ ಬಿಗ್ ಶಾಕ್

ಬೆಂಗಳೂರು : ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರಿಗೆ ಮತ್ತೆ ಬಿಗ್​ ಶಾಕ್ ಎದುರಾಗಿದ್ದು, ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಶಾಸಕ ಹೆಚ್​.ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್​ ಜಾರಿಗೆ ಆದೇಶಿಸಿದೆ.

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ. ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

2 ಕೋಳಿ, 2 ಸಾವಿರ ಹಂಚಿದ ಆರೋಪ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್‌.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ. ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

RELATED ARTICLES

Related Articles

TRENDING ARTICLES