Wednesday, January 22, 2025

ನಿವೇಶನ ವಿಚಾರಕ್ಕೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ನಿವೇಶನ ವಿಚಾರದಲ್ಲಿ ಉಂಟಾದ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಹೆಬ್ಬಗೋಡಿಯಲ್ಲಿ ನಡೆದಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ಹಿಂಭಾಗದ ಪ್ರದೇಶದಲ್ಲಿ ಈ ಕೊಲೆ ನಡೆದಿದ್ದು, ಹೆಬ್ಬಗೋಡಿಯ ರಮೇಶ್ ಎಂಬವರನ್ನು ಕೊಚ್ಚಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ 10.30ರ ಸಮಯದಲ್ಲಿ ಘಟನೆ ನಡೆದಿದೆ. ರಮೇಶ್ ಮನೆಯ ಎದುರು ಮನೆಯಾತನೇ ಕೊಲೆ ಮಾಡಿದ್ದಾನೆ.

ಹೆಬ್ಬಗೋಡಿಯ ಜಾಗದಲ್ಲಿ ಮನೆ ಕಟ್ಟುವ ವಿಚಾರಕ್ಕೆ ಆಗಾಗ ರಮೇಶ ಹಾಗೂ ಕೊಲೆ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಸರ್ಕಾರದಿಂದ ಅಲಾಟ್ ಆಗಿದ್ದ ಜಾಗದಲ್ಲಿ ರಮೇಶ್ ನಿನ್ನೆ ಮನೆಗೆ ಅಡಿಪಾಯ ಹಾಕಿದ್ದರು. ಇದೇ ಜಾಗ ತನಗೆ ಸೇರಬೇಕು ಎಂದು ಮನೆಯ ಜಗದೀಶ್ ಆಗಾಗ ಗಲಾಟೆ ಮಾಡಿದ್ದ. ಹೆಬ್ಬಗೋಡಿ ನಗರಸಭೆಯಿಂದ ಈ ಜಾಗ ರಮೇಶ್‌ಗೆ ಸೇರಿದ್ದು ಎಂದು ದಾಖಲೆ ನೀಡಲಾಗಿತ್ತು.

ಮಾರಕಾಸ್ತ್ರಗಳ ಜೊತೆ ಬಂದು ಕೊಲೆ

ಇದೇ ವಿಚಾರಕ್ಕಾಗಿ ನಿನ್ನೆ ರಾತ್ರಿ ರಮೇಶ್‌ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ರಾತ್ರಿ 10.30ರ ಸಮಯದಲ್ಲಿ ಮಾರಕಾಸ್ತ್ರಗಳ ಜೊತೆ ಬಂದು ಕೊಲೆ ಮಾಡಿದ ಹಂತಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES