Monday, December 23, 2024

ಹೃದಯಾಘಾತ ತಪ್ಪಿಸಲು ಕಠಿಣ ವ್ಯಾಯಾಮ ಬಿಡಿ : ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

ಬೆಂಗಳೂರು : ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕನಿಷ್ಠ ಒಂದರಿಂದ ಎರಡು ವರ್ಷಗಳ ಕಾಲ ಕಠಿಣ ವ್ಯಾಯಾಮ ಹಾಗೂ ಅತಿಯಾದ ಶ್ರಮದ ಕೆಲಸಗಳಲ್ಲಿ ತೊಡಗದಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಲಹೆ ನೀಡಿದ್ದಾರೆ.

ನವರಾತ್ರಿ ಹಬ್ಬದ ಆಚರಣೆ ವೇಳೆ ಗರ್ಬಾ ನೃತ್ಯದಲ್ಲಿ ತೊಡಗಿದ್ದಾಗ 10 ಮಂದಿ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತೀವ್ರವಾಗಿ ಕಾಡಿದ್ದ ಕೋವಿಡ್-19ನ ಪ್ರಭಾವ ಕಡಿಮೆಯಾಗಿ ಇನ್ನೂ ಸಾಕಷ್ಟು ನಮಯ ಕಳೆದಿಲ್ಲ. ಹೀಗಿರುವಾಗ ನಾವು ನಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.

ಐಸಿಎಂಆರ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ಹೃದಯಾಘಾತವನ್ನು ತಪ್ಪಿಸಲು ಕನಿಷ್ಠ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಅತಿಯಾದ ಆಯಾಸವಾಗುವಂತಹ ಕೆಲಸ, ಓಟ ಹಾಗೂ ಕಠಿಣ ವ್ಯಾಯಾಮದಲ್ಲಿ ತೊಡಗದಂತೆ ಉಲ್ಲೇಖಿಸಿದೆ. ಈ ಕಾರಣದಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಕೋವಿಡ್ ಸಮಸ್ಯೆಯಿಂದ ಬಳಲಿ ಗುಣಮುಖರಾದವರು ಈ ಬಗ್ಗೆ ಮತ್ತಷ್ಟು ಜಾಗ್ರತೆ ವಹಿಸಬೇಕು. ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಇದು ಸರಿಯಾದ ಮಾರ್ಗ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES