ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೆಚ್ಚಳಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ತೀವ್ರಗೊಂಡಿದ್ದು ಎನ್ಸಿಪಿ ಕಚೇರಿ ಮುಖಂಡರ ಮನೆಗಳಿಗೂ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದೆ.
ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಪ್ರತಿಭಟನೆ ಹಿನ್ನೆಲೆ ಕರ್ನಾಟಕದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಇದನ್ನು ಓದಿ: ಕೇಂದ್ರ ಗುಪ್ತಚರ ಇಲಾಖೆ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಶರಣು!
ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮರಗಾ ತಾಲೂಕಿನ ತುರೋರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಿದ್ದು, ಆಕ್ರೋಶ ಭುಗಿಲೆದ್ದಿದೆ. ಇನ್ನೂ ಹೆಚ್ಚಿನ ಅವಘಡಗಳು ಸಂಬಂಧಿಸದಂತೆ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಮರಾಠ ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತರೂಢ ಬಿಜೆಪಿ-ಶಿವಸೇನೆ-ಎನ್ಸಿಪಿ ಸರ್ಕಾರದ ಶಾಸಕರು ಹಾಗೂ ಸಚಿವರ ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಘರ್ಷಣೆ ಬೆನ್ನಲ್ಲೇ ಮಹಾರಾಷ್ಟ್ರದ ಬೀಡ್ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
बीडमध्ये राष्ट्रवादी कॅांग्रेसचं ( शरद पवार गट ) कार्यालय मराठा आंदोलकांनी पेटवून दिलं. #MarathaReservation #MaharashtraPolitics pic.twitter.com/j4N67OAyHr
— Abhijit Karande (@AbhijitKaran25) October 30, 2023