Wednesday, January 22, 2025

ಕೇಂದ್ರ ಗುಪ್ತಚರ ಇಲಾಖೆ ಪೊಲೀಸ್​ ಸಿಬ್ಬಂದಿ ಆತ್ಮಹತ್ಯೆಗೆ ಶರಣು!

ತುಮಕೂರು: ಕೇಂದ್ರ ಗುಪ್ತಚರ ಇಲಾಖೆ ಪೊಲೀಸ್​ ಸಿಬ್ಬಂದಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಹೊರವಲಯದ ಶೀರಾಗೇಟ್​ ಕ್ವಾಟ್ರಸ್​ ನಲ್ಲಿ ನಡೆದಿದೆ.

ನಾಗಮಂಗಲ ಮೂಲದ ವಿ.ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೌಟುಂಬಿಕ ಕಲಹದಿಂದ ಕೃಷ್ಣ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎನ್ನುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಡ್ರೈವರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ಕೃಷ್ಣ ಕೌಟುಂಬಿಕ ಕಲದಿಂದ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.

ಇದನ್ನೂ ಓದಿ: ಜಿಂಕೆ ಮಾಂಸ ಸಂಗ್ರಹ; ಇಬ್ಬರ ಬಂಧನ!  

ಘಟನಾ ಸ್ಥಳಕ್ಕೆ ಆಗಮಿಸಿದ ತುಮಕೂರು ನಗರ ಪೊಲೀಸರು ಪರಿಶೀಲನೆ ನಡೆಸಿದ್ದು ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು. ಈ ಪ್ರಕರಣವನ್ನು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES