Wednesday, January 22, 2025

ಡಿಕೆಶಿ ಗುಂಡಾಗಳನ್ನು ಕಳುಹಿಸಿ ಮನೆಗೆ ಅಶ್ಲೀಲ ಪೋಸ್ಟರ್ ಹಚ್ಚಿದ್ದಾರೆ : ರಮೇಶ್ ಜಾರಕಿಹೊಳಿ

ಬೆಳಗಾವಿ : ಬೆಂಗಳೂರಿನಲ್ಲಿ ತಮ್ಮ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ‌ ವಿಚಾರ ಸಂಬಂಧ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಗುಂಡಾಗಳನ್ನು ಕಳುಹಿಸಿ ಮನೆಗೆ ಅಶ್ಲೀಲ ಫೋಟೋ ಹಚ್ಚಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲ, ಅವರು ಡಿಕೆಶಿಯ ಗುಂಡಾ ಎಂದು ಕಿಡಿಕಾರಿದ್ದಾರೆ.

ಸಿಡಿ ಪ್ರಕರಣದಲ್ಲಿ ಅಪಮಾನ ಮಾಡಿದಾಗ ಏನು ಬೇಕಾದರೂ ಮಾಡಬಹುದು ಇತ್ತು. ಕೊತ್ವಾಲ ರಾಮಚಂದ್ರನ ಶಿಷ್ಯ ಇಂದು ಈ ರೀತಿ ಮಾಡಿದ್ದಾರೆ. ಗೋಕಾಕ್ ನಲ್ಲಿ ಕೇಸ್ ದಾಖಲು ಮಾಡಿದ್ದೇನೆ. ಕೇಸ್ ಬೆಂಗಳೂರಿಗೆ ವರ್ಗಾವಣೆ ಮಾಡಲು ಕಾನೂನು ಹೋರಾಟ ಮಾಡುತ್ತೇನೆ. ಸಿಡಿ ಪ್ರಕರಣ ಸಿಬಿಐಗೆ ವಹಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡುತ್ತೇನೆ. ಪತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸದಾಶಿವ ನಗರದ ಕೇಸ್ ಅನ್ನು ಸಿಬಿಐ ವಹಿಸಬೇಕು. ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಐಜಿಗೆ ಪತ್ರ ಬರೆಯುತ್ತೇನೆ. ಸಿಡಿಯಲ್ಲಿ ಡಿ.ಕೆ ಶಿವಕುಮಾರ್ ನೇರವಾಗಿ ಪಾತ್ರ ಇದೆ. ನೇರವಾಗಿ ಶಿವಕುಮಾರ್ ಪಾತ್ರ ಇದೆ. ಇಲ್ಲವಾದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಮೇಶ್ ಜಾರಕಿಹೊಳಿ ಮುಗಿಸಿದ್ದೇನೆ ಎಂದು ಹೇಳಿದ ಆಡಿಯೋ ಇದೆ. ಸಿಬಿಐ ತನಿಖೆ ಆದ್ರೆ ಎಲ್ಲಾ ದಾಖಲೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಡಿಕೆಶಿ ಸಿಡಿ ಪ್ಯಾಕ್ಟರಿ ಬಂದ್ ಆಗಬೇಕು

ಡಿ.ಕೆ. ಶಿವಕುಮಾರ್ ಬಹಳ‌ ವೀಕ್ ಮನುಷ್ಯ. ಕೇವಲ ಬ್ಲ್ಯಾಕ್ ಮೇಲೆ ಮಾಡೋದು ಅವನ ಕೆಲಸ. ಡಿ.ಕೆ. ಶಿವಕುಮಾರ್ ಸಿಡಿ ಪ್ಯಾಕ್ಟರಿ ಬಂದ್ ಆಗಬೇಕು ಅಂದ್ರೆ ಸಿಬಿಐಗೆ ವಹಿಸಬೇಕು. ಹೈಕೋರ್ಟ್ ಇಲ್ಲವೇ ಸುಪ್ರೀಂ ಕೋರ್ಟ್ ಮೆಟ್ಟಿಲು ಏರುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES