Wednesday, January 22, 2025

ವಿದ್ಯುತ್ ಟವರ್​ಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

ತುಮಕೂರು : ವಿದ್ಯುತ್‌ ಟವರ್‌ಗೆ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗುಂಡ್ಲಹಳ್ಳಿ ಕೆರೆಯ ಬಳಿ ನಡೆದಿದೆ.

ಗುಂಡ್ಲಹಳ್ಳಿ ಕೆರೆ ಬಳಿಯ ಜಮೀನಿನಲ್ಲಿ ವಾಸವಿದ್ದ ನಾರಾಯಣಪ್ಪ ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗೆ ಟೊಮೆಟೋ ಬೆಳೆದಿದ್ದು, ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದರು.

ಕೈ ಸಾಲ ಸೇರಿದಂತೆ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES