Saturday, May 18, 2024

ಸಾರಿಗೆ ನೌಕರರಿಗೆ ಸಿಹಿಸುದ್ದಿ ಕೊಟ್ಟ KSRTC!

ಬೆಂಗಳೂರು: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಂತಹ ಸಿಹಿ ಸುದ್ದಿ ಕೊಟ್ಟಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. KSRTCಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದ್ದು, ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ರೂ.1 ಕೋಟಿ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ 15 ದಿನ ನಿತ್ಯ 2,600 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ಮುಂದುವರೆದು, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ.

 

RELATED ARTICLES

Related Articles

TRENDING ARTICLES