Wednesday, January 22, 2025

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : 10 ಸಂಘ ಸಂಸ್ಥೆ, 68 ಸಾಧಕರಿಗೆ ಪ್ರಶಸ್ತಿಯ ಗರಿ

ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 10 ಸಂಘ ಸಂಸ್ಥೆಗಳೂ ಸೇರಿದಂತೆ ಒಟ್ಟು 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ.

ಈ ಬಾರಿ ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಮೂವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಇಸ್ರೋ ಅಧ್ಯಕ್ಷ ಸೋಮನಾಥ್‌ಗೂ ಪ್ರಶಸ್ತಿ ಘೋಷಣೆಯಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಚಲನಚಿತ್ರ ರಂಗದಲ್ಲಿ ಡಿಂಗ್ರಿ ನಾಗರಾಜು, ಬ್ಯಾಂಕ್‌ ಜನಾರ್ಧನ್ ಅವರಿಗೆ ಘೋಷಣೆಯಾ್ಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ.ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಸತೀಶ್‌ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಏಷ್ಯನ್ ಗೇಮ್ಸ್​ನಲ್ಲಿ 2 ಬೆಳ್ಳಿ ಪದಕ ಗೆದ್ದ ಶೂಟರ್ ದಿವ್ಯಾ ಟಿಎಸ್​ಗೂ ಪ್ರಶಸ್ತಿ ಒಲಿದಿದೆ.

RELATED ARTICLES

Related Articles

TRENDING ARTICLES