ಬೆಂಗಳೂರು : ಬರೋಬ್ಬರಿ 52 ದಿನಗಳ ಸೆರೆವಾಸದ ಬಳಿಕ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ರಾಜಮಂಡ್ರಿ ಜೈಲಿನಿಂದ ಚಂದ್ರಬಾಬು ನಾಯ್ಡು ರಿಲೀಸ್ ಆಗಿದ್ದು, ಹೊರ ಬರುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮುತ್ತಿಕೊಂಡಿದ್ದಾರೆ. ನಾಯ್ಡು ಪರ ಟಿಡಿಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಘೋಷಣೆ ಕೂಗಿದ್ದಾರೆ.
ಚಂದ್ರಬಾಬು ನಾಯ್ಡು ಅವರ ವಿರುದ್ಧ ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಹಲವು ಪ್ರಕರಣಗಳು ದಾಖಲಾಗಿತ್ತು. ಇದೀಗ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬಹುಕೋಟಿ ಕೌಶಲಾಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಜೈಲಿನಲ್ಲಿದ್ದರು. ಆದರೆ, ಆರೋಗ್ಯ ಸಮಸ್ಯೆಯಿಂದಾಗಿ ಇದೀಗ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಎಸಿಬಿ ಕೋರ್ಟ್ ಜಾಮೀನು
ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡ ಎಸಿಬಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೂ ಈ ಹಗರಣದಲ್ಲಿ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.