ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮಳೆಯಾಗುವ ಬಗ್ಗೆ ವರದಿಯಾಗಿದೆ. ಹಲವು ಜಿಲ್ಲೆಗಳಿಗೆ ಈ ಹಿಂಗಾರು ಮಳೆ ಕೊಂಚ ನೆಮ್ಮದಿ ನೀಡುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.