Wednesday, January 22, 2025

ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್ : ಯುವಜನತೆಗೆ ಗುಡ್​ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮಂಡ್ಯ : ನಾವು ಐದು ಗ್ಯಾರಂಟಿಯಲ್ಲಿ ನಾಲ್ಕು ಗ್ಯಾರಂಟಿ ಕೊಟ್ಟಿದ್ದೇವೆ. ಜನವರಿ ಮೊದಲನೇ ವಾರದಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ಜಾರಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಾರೆ. ನಮ್ಮ ದೇಶ ಎಲ್ಲಾ ಧರ್ಮ ಜಾತಿ ಇರುವ ದೇಶ. ಎಲ್ಲರನ್ನೂ ಒಟ್ಟಿಗೆ ನೋಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ಪತ್ರಕರ್ತರ ಜವಾಬ್ದಾರಿ ಹೆಚ್ಚಿದೆ. ಸರ್ಕಾರ ಮಾಡುವು ತಪ್ಪುಗಳನ್ನ ಎತ್ತಿ ಹಿಡಿಯುವ ಕೆಲಸವನ್ನು ಪತ್ರಕರ್ತರು ಮಾಡ್ತಾರೆ. ಸರ್ಕಾರ ಜನಪರವಾಗಿದ್ಯಾ? ಜನರಿಗೆ ಸ್ಪಂದಿಸುವ ಕೆಲಸವನ್ನ ಸರ್ಕಾರ ಮಾಡ್ತಿದ್ಯಾ? ಇವೆಲ್ಲವನ್ನೂ ತೋರಿಸುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಪರಿಶೀಲನೆ ಮಾಡ್ತಿದ್ದೇನೆ. ನಾವು ಯಾವಾಗಲೂ ಪತ್ರಕರ್ತರ ಪರ ಇರ್ತೇವೆ. ನಮ್ಮ ಬಗ್ಗೆ ಯಾವುದೇ ಅಪನಂಬಿಕೆ ಇಟ್ಟುಕೊಳ್ಳಬೇಡಿ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಸುಭದ್ರವಾಗಿದೆ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಸರ್ಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ನಾಯಕರೊಬ್ಬರು ಹೇಳಿದ ಮಾತ್ರಕ್ಕೆ ಸರ್ಕಾರ ಪತನವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

RELATED ARTICLES

Related Articles

TRENDING ARTICLES